ಪತ್ರಿಕಾ ಪ್ರಕಟಣೆ – ಪೊಲೀಸರಿಗೆ ಯೋಗ ಶಿಕ್ಷಣ

ಪತ್ರಿಕಾ ಪ್ರಕಟಣೆ

ಕೆಜಿಎಫ್ : ಪೊಲೀಸರಿಗೆ ಯೋಗ ಶಿಕ್ಷಣ ಬಹುಮುಖ್ಯ : ಎಸ್ಪಿ ಭಗವಾನ್‌ದಾಸ್ ಕರೆ
ಕೆ.ಜಿ.ಎಫ್., ಆ. ೨೦ :

ಬಿಡುವಿಲ್ಲದ ಕೆಲಸದ ಮಧ್ಯೆ ಸಾರ್ವಜನಿಕರ ಪ್ರಾಣ, ಮಾನಹಾನಿಗಳ ರಕ್ಷಣೆಗಾಗಿ ದುಡಿಯುವ, ಕಾನೂನು ಸುವ್ಯವಸ್ಥೆ ಪಾಲನೆಯಲ್ಲಿ ಶ್ರಮಿಸುವಂತಹ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಯೋಗ ಶಿಕ್ಷಣ ತರಬೇತಿಯು ಬಹುಮುಖ್ಯವಾಗಿದೆಯೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಅಭಿಪ್ರಾಯಪಟ್ಟರು.
ಅವರು ಕೆಜಿಎಫ್ ಜಿಲ್ಲಾ ಪೊಲೀಸ್, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಮತ್ತು ಕನ್ನಡ ಸಂಘದ ಸಂಯುಕ್ತಾಶ್ರಯದಲ್ಲಿ ರಾಬರ್ಟ್‌ಸನ್‌ಪೇಟೆಯ ಕನ್ನಡ ಸಂಘದ ಸಭಾಂಗಣದಲ್ಲಿ ಹಮ್ಮಿಕೊಂಡಿರುವ ಯೋಗ ಶಿಬಿರವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ, ಈ ಯೋಗ ಶಿಬಿರವನ್ನು ಪ್ರತಿನಿತ್ಯ ಬೆಳಿಗ್ಗೆ ೦೭.೦೦ ರಿಂದ ೦೮.೦೦ ಗಂಟೆಯ ತನಕ ೩೦ ದಿನಗಳ ಕಾಲ ಕನ್ನಡ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದು, ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಪ್ಪದೇ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.

ಪೊಲೀಸರು ಕಾನೂನು ಸುವ್ಯವಸ್ಥೆ ಅಡಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುವ ಮಧ್ಯೆ ಮನೋವಿಕಾಸಕ್ಕಾಗಿ ಮಾನಸಿಕವಾಗಿ ಸದೃಢರಾಗಿರಲು ಯೋಗ ಶಿಕ್ಷಣ ತರಗತಿಗಳನ್ನು ನಡೆಸುತ್ತಿದ್ದು, ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಯೋಗ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿ, ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ಸಂಘದ ಅಧ್ಯಕ್ಷ ನರಸಿಂಹೇಗೌಡ ನಾರಾಣಾಪುರ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಭಾಗ್ಯಜ್ಯೋತಿ, ವಿವೇಕ್, ಡಿವೈಎಸ್ಪಿ ಪುಟ್ಟಮಾದಯ್ಯ ಸೇರಿದಂತೆ ಜಿಲ್ಲೆಯ ಎಲ್ಲಾ ಸಿಪಿಐ, ಪಿಎಸ್‌ಐ, ಸಿಬ್ಬಂದಿಗಳು ಭಾಗವಹಿಸಿದ್ದರು.

ಮೊದಲಿಗೆ ಅಂಜು, ಬೃಂದಾ ತಂಡದಿಂದ ಪ್ರಾರ್ಥನೆ, ರಮೇಶ್ ಅವರಿಂದ ಪ್ರಾರ್ಥನೆ, ರಶ್ಮಿ ಅವರಿಂದ ನಿರೂಪಣೆ, ಚಲಪತಿ ಅವರಿಂದ ವಂದನೆಗಳಾದವು.

DSC04856 DSC04857 DSC04860 DSC04868 DSC04871 DSC04876

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s