ಮಹಾತ್ಮ ಗಾಂಧಿ ಜಯಂತಿ ಆಚರಣೆ

 

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗಾಂಧಿಜಯಂತಿ ಆಚರಣೆ

ಕೆಜಿಎಫ್., ಅ. ೨ :

ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶುಕ್ರವಾರದಂದು ಮಹಾತ್ಮಗಾಂಧಿ ಜಯಂತಿಯನ್ನು ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲಾಯಿತು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಮಹಾತ್ಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮಗಾಂಧಿಜೀ ಅವರ ಕೊಡುಗೆಯನ್ನು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಸ್ವಚ್ಚತೆ ಕಾರ್ಯಕ್ರಮಕ್ಕೆ ಎಸ್ಪಿ ಭಗವಾನ್‌ದಾಸ್ ಅವರು ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಕಛೇರಿಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಚ್ಚತೆಯನ್ನು ಶ್ರಮದಾನದ ಮೂಲಕ ಮಾಡಲಾಯಿತು. ಶ್ರಮದಾನದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.
ಡಿವೈಎಸ್ಪಿ ಪುಟ್ಟಮಾದಯ್ಯ, ಸರ್ಕಲ್ ಇನ್ಸ್‌ಪೆಕ್ಟರ್ ಎಸ್.ಆರ್.ಜಗದೀಶ್, ವೆಂಕಟಾಚಲಪತಿ, ನಿಸ್ತಂತು ನಿರೀಕ್ಷಕ ಉಮಾಶಂಕರ್, ಆರ್‌ಪಿಐ ಕೆ.ಆರ್.ರಘು, ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ, ವೃತ್ತ ಕಛೇರಿಗಳಲ್ಲಿ ಹಾಗೂ ಡಿ.ಎ.ಆರ್. ಆವರಣದಲ್ಲಿ ಸ್ವಚ್ಚತೆ ಕಾರ್ಯಕ್ರಮವನ್ನು ಗಾಂಧಿ ಜಯಂತಿ ಪ್ರಯುಕ್ತ ಮಾಡಲಾಯಿತು.
ಚಿತ್ರ ಶಿರ್ಷಿಕೆ: ೦೨ ಕೆಜಿಎಫ್ ೦೧: ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಎಸ್ಪಿ ಭಗವಾನ್‌ದಾಸ್, ಡಿವೈಎಸ್ಪಿ ಪುಟ್ಟಮಾದಯ್ಯ, ಎಎಓ ವಿಶ್ವನಾಥ ಇತರರು.

DSC04903

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s