ಪತ್ರಿಕಾ ಪ್ರಕಟಣೆ

ಪಿ.ಎಸ್.ಐ. ಜಗದೀಶ್ ಸಾವು, ಕೆಜಿಎಫ್‌ನಲ್ಲಿ ಪೊಲೀಸ್ ಇಲಾಖೆ ಶ್ರದ್ದಾಂಜಲಿ

ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ದೊಡ್ಡಬಳ್ಳಾಪುರ ಪಿ.ಎಸ್.ಐ. ಜಗದೀಶ್ ಹತ್ಯೆಯಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಿತು. ಪೊಲೀಸ್ ಉಪ ರಕ್ಷಣಾಧಿಕಾರಿ ಪುಟ್ಟಮಾದಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಪಿ.ಎಸ್.ಐ. ಜಗದೀಶ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಎರಡು ನಿಮಿಷ ಮೌನ ಆಚರಿಸಿ ಗೌರವ ಶ್ರದ್ದಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ ಅವರು ಮಾತನಾಡಿ, ಹತ್ಯೆಗೊಳಗಾದ ಸಬ್‌ಇನ್ಸ್‌ಪೆಕ್ಟರ್ ಜಗದೀಶ್ ಅವರು ಪೊಲೀಸ್ ಇಲಾಖೆಯಲ್ಲಿ ನಿರ್ಭಿತಿಯಿಂದ ದುಡಿಯುವ ಮೂಲಕ ಅಪಾರವಾದ ಕೊಡುಗೆ ನೀಡಿದ್ದಾರೆ. ಇಂದಿನ ಸಮಾಜದಲ್ಲಿ ಜಗದೀಶ್ ಅವರು ಸರಳ ಸಜ್ಜನಿಕೆಗೆ ಹೆಸರಾಗಿದ್ದು, ಜನಸ್ನೇಹಿ ಪೊಲೀಸ್ ಆಗಿ ಉತ್ತಮ ಸೇವೆ ಸಲ್ಲಿಸುತ್ತಿದ್ದರು, ಅವರ ಕುಟುಂಬ ವರ್ಗದವರಿಗೆ, ಬಂಧು ಬಾಂದವರಿಗೆ, ಅಭಿಮಾನಿಗಳಿಗೆ ಜಗದೀಶ್ ಅವರನ್ನು ಕಳೆದುಕೊಂಡ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲೆಂದು ಪೊಲೀಸ್ ಉಪ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರು ಪ್ರಾರ್ಥಿಸಿದರು.

ಬೇತಮಂಗಲ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಬಿ.ಟಿ. ಗೋವಿಂದ ಅವರು ಮಾತನಾಡಿ, ತನ್ನ ಸಹಪಾಠಿ ಜಗದೀಶ್ ಅವರು ೨೦೦೫ರಲ್ಲಿ ಪೊಲೀಸ್ ಪೇದೆಯಾಗಿ ನೇಮಕಗೊಂಡು ಇಲಾಖೆಯ ಮೂಲಕ ಪರೀಕ್ಷೆ ಬರೆದು, ೨೦೧೦ರಲ್ಲಿ ಪಿ.ಎಸ್.ಐ. ಆಗಿ ನೇಮಕವಾಗಿದ್ದು, ಕರ್ತವ್ಯದಲ್ಲಿ ದಕ್ಷತೆ, ಪ್ರಾಮಾಣಿಕತೆ, ನಿರ್ಭಿತಿಯಿಂದ ಸೇವೆ ಸಲ್ಲಿಸುವ ಮೂಲಕ, ಇಡೀ ರಾಜ್ಯಕ್ಕೆ ಮಾದರಿಯಾಗಿದ್ದರು, ಅವರ ನಿಧನದಿಂದ ರಾಜ್ಯ ಪೊಲೀಸ್ ಇಲಾಖೆಗೆ ತುಂಬಲಾರದ ನಷ್ಟ ಉಂಟಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ, ಶಾಖಾಧೀಕ್ಷಕ ಹೆಚ್. ಪ್ರಸನ್ನಕುಮಾರ್, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಎಂ.ಡಿ.ಲಕ್ಷ್ಮೀನಾರಾಯಣ, ಜಿ.ಎನ್. ವೆಂಕಟಾಚಲಪತಿ, ಎನ್.ಉಮಾಶಂಕರ್, ಕೃಷ್ಣಾ, ಇಲ್ಲಿನ ಪಿಎಸ್‌ಐ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿದ್ದರು.

ಪಿಎಸ್‌ಐ ಜಗದೀಶ್ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ ಇತರರು ಇದ್ದಾರೆ.

ಕೆಜಿಎಫ್ : ಅ. ೨೧ ರಂದು ಪೊಲೀಸ್ ಹುತಾತ್ಮರ ದಿನಾಚರಣೆ

ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ವತಿಯಿಂದ ರಾಬರ್ಟ್‌ಸನ್‌ಪೇಟೆಯಲ್ಲಿನ ಪೊಲೀಸ್ ವೃತ್ತದಲ್ಲಿ ಅ.೨೧ರ ಬುಧವಾರದಂದು ಬೆಳಿಗ್ಗೆ ೮.೦೦ ಗಂಟೆಗೆ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕೋಲಾರದ ೧ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ್ ಅವರು ಮುಖ್ಯ ಅತಿಥಿಗಳಾಗಿ, ಮುಳಬಾಗಲು ತಾಲ್ಲೂಕು ಮಿಣಜೇನಹಳ್ಳಿಯ ಸಶಕ್ತ ಮಹಿಳೆ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಪಾಪಮ್ಮ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು. ಅ. ೨೧ ರಂದು ಪೊಲೀಸ್ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಕೆ, ಪಥಸಂಚಲನ, ಪೊಲೀಸ್ ಸ್ಮಾರಕಕ್ಕೆ ಗೌರವ ಸಮರ್ಪಣೆ ಕಾರ್ಯಕ್ರಮಗಳು ನಡೆಯುವುದು.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s