ಪತ್ರಿಕಾ ಪ್ರಕಟಣೆ 31.10.2015

  ಪ ತ್ರಿ ಕಾ ಪ್ರ ಕ ಟ ಣೆ
ನಿವೃತ್ತ ಪೊಲೀಸ್ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ ಸಮಾರಂಭ.

ಕೆಜಿಎಫ್ ಜಿಲ್ಲಾ ಪೊಲೀಸ್ ವತಿಯಿಂದ ಡಿ.ಎ.ಆರ್. ಪೊಲೀಸ್ ಕವಾಯಿತು ಮೈದಾನದಲ್ಲಿಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ 03 ಮಂದಿ ಪೊಲೀಸ್ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ, ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸೇವೆಯಲ್ಲಿರುವಾಗ ಪ್ರತಿಯೊಬ್ಬ ಸರ್ಕಾರಿ ನೌಕರರು ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.

ನಿವೃತ್ತ ಅಧಿಕಾರಿಗಳಾದ ಡಿ.ಎ.ಆರ್.ನ ಆರ್.ಎಸ್.ಐ. ಕೆ.ಆರ್. ಗೌಡಪ್ಪ, ಮಾರಿಕುಪ್ಪಂ ಅಪರಾಧ ವಿಭಾಗದ ಪಿಎಸ್‌ಐ ವೈ.ಎ. ವಿಜಯಕುಮಾರ್, ಸಶಸ್ತ್ರ ಪೊಲೀಸ್ ಪೇದೆ ಎಂ.ನಾರಾಯಣ ರವರುಗಳು ಪೊಲೀಸ್ ಇಲಾಖೆಯ ವಿವಿಧ ವಿಭಾಗ, ಠಾಣೆ, ಕಛೇರಿಗಳಲ್ಲಿ ತಮ್ಮ ಸೇವಾವಧಿಯಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ.

ಇವರುಗಳ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು. ಉದ್ಯೋಗಿಗಳಿಗೆ ಸರ್ಕಾರಿ ಸೇವೆಗೆ ಸೇರಿದ ಮೇಲೆ, ನಿವೃತ್ತಿಯು ಕಡ್ಡಾಯವಾಗಿ ಇದ್ದೇ ಇರುತ್ತದೆ, ಇರುವುದರೊಳಗೆ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕೆಂದರು. ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.

ನಿವೃತ್ತರಾದವರಿಗೆ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ, ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು.  ಈ ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ, ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಎಂ.ಡಿ. ಲಕ್ಷ್ಮೀನಾರಾಯಣ, ಜಿ.ಎನ್. ವೆಂಕಟಾಚಲಪತಿ, ಎಸ್.ಆರ್.ಜಗದೀಶ್, ಕೃಷ್ಣಾ, ಆರ್.ಪಿ.ಐ. ಕೆ.ಆರ್.ರಘು ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್‌ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

31 KGF 01 31 KGF01 31KGF01

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s