ಪ ತ್ರಿ ಕಾ ಪ್ರ ಕ ಟ ಣೆ

ಜಿಲ್ಲಾ ಪೊಲೀಸ್ ಕಛೇರಿ,
ಕೋಲಾರ ಚಿನ್ನದ ಗಣಿ ಪ್ರದೇಶ.                                                                                                 ದಿನಾಂಕ: ೦೭.೧೧.೨೦೧೫.

 

ಕಾಣೆಯಾದ ಮಕ್ಕಳ, ಮಹಿಳೆಯರ ರಕ್ಷಣೆಗೆ ಕ್ರಮ ಅಗತ್ಯ : ಸುಚಿತ್ರಾರಾವ್ ಕರೆ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಕಾಣೆಯಾದ ಮಕ್ಕಳ ಹಾಗೂ ದೌರ್ಜನ್ಯಕ್ಕೊಳಗಾದ ಮಹಿಳೆಯರ ರಕ್ಷಣೆಗೆ ಇಲ್ಲಿನ ಪೊಲೀಸ್ ಅಧಿಕಾರಿಗಳು ಪತ್ತೆ ಕಾರ್ಯಾಚರಣೆಯನ್ನು ಕ್ಷಿಪ್ರವಾಗಿ ನಡೆಸುವುದರ ಬಗ್ಗೆ ಅಗತ್ಯ ಕ್ರಮವಿಡುವಂತೆ ಪೊಲೀಸ್ ಇಲಾಖೆಯ ಪದನಿಮಿತ್ತ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ರಾಜ್ಯ ಸಂಪನ್ಮೂಲ ಅಧಿಕಾರಿ ಸುಚಿತ್ರಾರಾವ್ ಅವರು ಕರೆ ನೀಡಿದರು.

ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಶನಿವಾರದಂದು ಇಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಂಸ್ಥೆಗಳಿಗೆ ಏರ್ಪಡಿಸಿದ್ದ ಕಾಣೆಯಾದ ಮಕ್ಕಳ ರಕ್ಷಣೆಯ ಕುರಿತಾದ ಎಸ್.ಜೆ.ಪಿ.ಯು. ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಣೆಯಾಗಿರುವ ಮಕ್ಕಳನ್ನು ಪತ್ತೆ ಮಾಡಲು ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ವಿಶೇಷ ಕಾರ್ಯಾಚರಣೆ ಮಾಡುವ ಮೂಲಕ ಕಾಣೆಯಾದ ಮಕ್ಕಳನ್ನು ಪತ್ತೆ ಮಾಡಿ, ಪೋಷಕರಿಗೆ ಒಪ್ಪಿಸಬೇಕೆಂದು ಎಸ್.ಜೆ.ಪಿ.ಯು. ರಾಜ್ಯ ಸಂಪನ್ಮೂಲ ಅಧಿಕಾರಿ ಸುಚಿತ್ರಾರಾವ್ ಅವರು ಕರೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್. ಭಗವಾನ್‌ದಾಸ್ ಅವರು ಅಧ್ಯಕ್ಷತೆ ವಹಿಸಿದ್ದು, ಈ ಸಂದರ್ಭದಲ್ಲಿ ಅವರು ಮಾತನಾಡಿ, ಮಕ್ಕಳ ಸಂರಕ್ಷಣೆಯ ಕುರಿತು ಉಪಯುಕ್ತ ಸಲಹೆಗಳನ್ನು ನೀಡಿದರು. ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ೨೨ ಮಕ್ಕಳು ಕಾಣೆಯಾಗಿದ್ದು, ಇದರಲ್ಲಿ ೧೬ ಮಕ್ಕಳನ್ನು ಪತ್ತೆ ಮಾಡಿರುವುದು ಶ್ಲಾಘನೀಯ, ಕಾಣೆಯಾಗಿರುವ ಮಕ್ಕಳಿಗೆ ಯಾವುದೇ ರೀತಿಯಲ್ಲೂ ತೊಂದರೆ ನೀಡದಂತೆ, ಪೋಷಕರಿಗೆ ಒಪ್ಪಿಸಲು ಪೊಲೀಸರಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ವೃತ್ತ ನಿರೀಕ್ಷಕ ಎಂ.ಡಿ.ಲಕ್ಷ್ಮೀನಾರಾಯಣ, ಮಸ್ಕಂ ಬಾಲಮಂದಿರ ಅಧೀಕ್ಷಕ ತಹಸೀನ್ ಬೇಗಂ, ಮಹಿಳಾ ಮತ್ತು ಮಕ್ಕಳ ಪೋಷಣಾ ಸಂಸ್ಥೆಗಳ ಪ್ರತಿನಿಧಿಗಳಾದ ನಿಕೋಲಸ್, ಸುಮಿತ್ರಾ, ಶ್ರೀನಾಥ್ ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್‌ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

07 KGF 01

07KGF01

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s