ಪತ್ರಿಕಾ ಪ್ರಕಟಣೆ ದಿನಾಂಕ 30.01.2016

ಪತ್ರಿಕಾ ಪ್ರಕಟಣೆ

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಹುತಾತ್ಮರ ದಿನಾಚರಣೆ

ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್‌ರೀಫ್ಸ್‌ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಮೌನ ಆಚರಿಸುವ ಮೂಲಕ ಅರ್ಥಪೂರ್ಣವಾಗಿ ಹುತಾತ್ಮರ ದಿನಾಚರಣೆ ಆಚರಿಸಲಾಯಿತು.

        ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಹುತಾತ್ಮರ ದಿನಾಚರಣೆಯ ಕಾರ್ಯಕ್ರಮದಲ್ಲಿ, ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಶನಿವಾರದಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪೊಲೀಸ್ ಕಛೇರಿಯ ಎಲ್ಲಾ ಕೆಲಸ ಕಾರ್ಯಗಳನ್ನು ಹಾಗೂ ಚಲನೆಯನ್ನು ಸ್ಥಗಿತಗೊಳಿಸಿ ಎರಡು ನಿಮಿಷ ಮೌನ ಆಚರಿಸಲಾಯಿತು.

         ಮೌನಾಚರಣೆಗೂ ಮುನ್ನ ಎಎಸ್‌ಐ ವಿಕ್ರಂ ಶ್ರೀನಿವಾಸ್, ಚಂದ್ರಶೇಖರ್ ತಂಡದಿಂದ ರಘುಪತಿ ರಾಘವ ರಾಜಾರಾಂ ಭಜನೆಯನ್ನು ಹಾಡಲಾಯಿತು.

         ಡಿವೈಎಸ್ಪಿ ಪುಟ್ಟಮಾದಯ್ಯ, ಜಿಲ್ಲಾ ಗುಪ್ತ ದಳದ ನಿರೀಕ್ಷಕ ಎಂ.ಡಿ.ಲಕ್ಷ್ಮೀನಾರಾಯಣ, ಡಿಸಿಐಬಿ ನಿರೀಕ್ಷಕ ಕೃಷ್ಣಾ, ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಎಸ್.ಆರ್.ಜಗದೀಶ್, ಜಿ.ಎನ್.ವೆಂಕಟಾಚಲಪತಿ, ಎಂ.ಎಸ್.ಪವನ್‌ಕುಮಾರ್, ನಿಸ್ತಂತು ಇನ್ಸ್‌ಪೆಕ್ಟರ್ ಎನ್.ಉಮಾಶಂಕರ್, ಆರ್‌ಪಿಐ ಕೆ.ಆರ್.ರಘು ಸೇರಿದಂತೆ ಜಿಲ್ಲೆಯ ಎಲ್ಲಾ ಪಿ.ಎಸ್.ಐ.ಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

 ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ಹುತಾತ್ಮರ ಮೌನಾಚರಣೆಯ ಕಾರ್ಯಕ್ರಮದಲ್ಲಿ ಎಸ್ಪಿ ಭಗವಾನ್‌ದಾಸ್ ಇತರರು ಬಾಗವಹಿಸಿರುತ್ತಾರೆ.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Google+ photo

You are commenting using your Google+ account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

w

Connecting to %s