ನಿವೃತ್ತ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ 29.02.2016

 ಪತ್ರಿಕಾ ಪ್ರಕಟಣೆ

ನಿವೃತ್ತ ಅಧಿಕಾರಿಗಳಿಗೆ ಹಾರ್ಥಿಕ ಬಿಳ್ಕೋಡುಗೆ

ಕೆಜಿಎಫ್ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಪೆಬ್ರವರಿ ೨೯ ರಂದು ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿ ಹೊಂದಿದ ಎಎಸ್‌ಐ ಬಿ.ಮುನಿಯಪ್ಪ, ಮುಖ್ಯಪೇದೆ  ಕೆ. ಮೂರ್ತಿ, ಮತ್ತು  ಡಿಎಆರ್ ಮುಖ್ಯಪೇದೆ ವಿ. ರಾಮಕೃಷ್ಣ ಅವರುಗಳಿಗೆ ಹಾರ್ಥಿಕ ಬಿಳ್ಕೋಡುಗೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸೇವೆಯಲ್ಲಿರುವಾಗ ಪ್ರತಿಯೊಬ್ಬ ಸರ್ಕಾರಿ ನೌಕರರು ಉತ್ತಮವಾದ ಸೇವೆಯನ್ನು ಸಲ್ಲಿಸುವ ಮೂಲಕ, ಅವರ ಸೇವೆಯು ಮುಂದಿನ ಯುವ ಜನಾಂಗಕ್ಕೆ ಆದರ್ಶವಾಗುವ ಮೂಲಕ ಜನಸಾಮಾನ್ಯರ ಮನಗೆಲ್ಲುವ ಕಾರ್ಯ ಮಾಡಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್. ಭಗವಾನ್‌ದಾಸ್ ಅವರು ಕರೆ ನೀಡಿದರು.
ನಿವೃತ್ತ ಅಧಿಕಾರಿಗಳು ಆಂಡಸನ್‌ಪೇಟೆಯ ಎಎಸ್‌ಐ ಬಿ. ಮುನಿಯಪ್ಪ,  ರಾಬರ್ಟ್‌ಸನ್‌ಪೇಟೆ ಪೊಲೀಸ್ ಮುಖ್ಯಪೇದೆಯಾಗಿರುವ ಕೆ. ಮೂರ್ತಿ ಹಾಗೂ ಡಿಎಆರ್ ಮುಖ್ಯಪೇದೆಯಾಗಿರುವ ವಿ. ರಾಮಕೃಷ್ಣ ರವರುಗಳು ಪೊಲೀಸ್ ಇಲಾಖೆಯ ವಿವಿಧ ವಿಭಾಗ, ಠಾಣೆ, ಕಛೇರಿಗಳಲ್ಲಿ ಅರ್ಥಪೂರ್ಣ ಸೇವೆಯನ್ನು ಸಲ್ಲಿಸುವ ಮೂಲಕ ಯಶಸ್ವಿಯಾಗಿರುತ್ತಾರೆ.
ಇವರುಗಳ ಸೇವೆ, ಅನುಭವವು ಎಲ್ಲರಿಗೂ ಮಾರ್ಗದರ್ಶನವಾಗಲೆಂದರು. ಉದ್ಯೋಗಿಗಳಿಗೆ ನಿವೃತ್ತಿಯು ಇದ್ದೇ ಇರುತ್ತದೆ, ಇರುವುದರೊಳಗೆ ಉತ್ತಮವಾದ ರೀತಿಯಲ್ಲಿ ಸೇವೆಯನ್ನು ಸಲ್ಲಿಸಬೇಕೆಂದರು. ನೈತಿಕ ಬೆಂಬಲದೊಂದಿಗೆ ಉತ್ತಮ ಬಾಂಧವ್ಯದ ಪರಿಸರದಲ್ಲಿ ಸರ್ಕಾರಿ ಸೇವೆಯನ್ನು ಪ್ರಾಮಾಣಿಕವಾಗಿ ಸಲ್ಲಿಸುವ ನಿಷ್ಠೆಯನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ರಕ್ಷಣಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.
ನಿವೃತ್ತರಿಗೆ ಸನ್ಮಾನ ಮಾಡುವ ಕಾರ್ಯಕ್ರಮವನ್ನು ನಡೆಸುವ ಉದ್ದೇಶ ನಿವೃತ್ತರ ಸೇವಾವಧಿಯ ವಿಶೇಷ ಸಂದರ್ಭಗಳನ್ನು ಮೆಲುಕಾಕುವ ವಿಶೇಷ ಸಂದರ್ಭವಾಗಿದೆ, ಈ ಹೊಸ ದೃಷ್ಠಿಕೋನದ ಮೂಲಕ ನಿವೃತ್ತರ ಕಲ್ಯಾಣ ಕಾರ್ಯಕ್ರಮಗಳಿಗೆ ರೂಪುರೇಷೆಗಳನ್ನು ರೂಪಿಸಿ, ನಿವೃತ್ತರಾದವರ ಮಕ್ಕಳು, ಕುಟುಂಬದವರಿಗೆ ಉತ್ತಮ ಆರೋಗ್ಯ, ಶಿಕ್ಷಣ, ವಿಶೇಷ ಸ್ಥಾನಮಾನಗಳನ್ನು ದೊರಕಿಸಲು ಮುಂದಾಗಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್.ಆರ್.ಭಗವಾನ್‌ದಾಸ್ ಅವರು ಕರೆ ನೀಡಿದರು.
ನಿವೃತ್ತರಾದವರಿಗೆ ಶಾಲು ಹೊದಿಸಿ, ಹಣ್ಣು ಹಂಪಲು ನೀಡಿ ಸನ್ಮಾನಿಸಿ, ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಡಿವೈಎಸ್ಪಿ  ಪುಟ್ಟಮಾದಯ್ಯ, ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ, ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಎಂ.ಡಿ. ಲಕ್ಷ್ಮೀನಾರಾಯಣ, ಜಿ.ಎನ್ ವೆಂಕಟಾಚಲಪತಿ, ಆರ್.ಪಿ.ಐ. ಕೆ.ಆರ್.ರಘು ಸೇರಿದಂತೆ ಜಿಲ್ಲೆಯ ಎಲ್ಲಾ ಪಿಎಸ್‌ಐಗಳು, ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s