ದಿನದ ಅಪರಾಧಗಳ ಪಕ್ಷಿನೋಟ 25 ನೇ ಮೇ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:25.05.2016ರಂದು  ಬೆಳಿಗ್ಗೆ 10.00 ಗಂಟೆಯಿಂದ ದಿನಾಂಕ 25.05.2016  ಸಂಜೆ 05.00 ಗಂಟೆಯವರೆಗೆ   ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ :ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ‌ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : ಇಲ್ಲ

-ಮನುಷ್ಯ ನಾಪತ್ತೆ : ಇಲ್ಲ

-ಜೂಜಾಟ ಕಾಯ್ದೆ : ಇಲ್ಲ

-ಅಪಘಾತಗಳು :02

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 24.05.2016 ರಂದು ಬೆಳಿಗ್ಗೆ ಸುಮಾರು 7.30 ಗಂಟೆಯಲ್ಲಿ ದೂರುದಾರರು ನೀಡಿದ ದೂರಿನಲ್ಲಿ. ದೂರುದಾರರು ಅವರ ದ್ವಿಚಕ್ರ ವಾಹನ ಟಿವಿಎಸ್ ವಿಕ್ಟರ್ ಕೆಎ-08-ಹೆಚ್‌-7104 ರಲ್ಲಿ ಆತನ ಸ್ನೇಹಿತನಾದ ಮಾರಪ್ಪ ಎಂಬುವರನ್ನು ಕುಳ್ಳರಿಸಿಕೊಂಡು ಕೋಟರಾಮಗೋಳ ಕಡೆಯಿಂದ ಮರಾಠಾ ಹೊಸಹಳ್ಳಿ ಕಡೆಗೆ ಹೋಗಲು ಕೋಟರಾಮಗೋಳ ಗ್ರಾಮದ ಬಳಿ ರಸ್ತೆಯಲ್ಲಿ ಹೋಗುತ್ತಿದ್ದಾಗ, ಮರಾಠಾ ಹೊಸಹಳ್ಳಿ ಕಡೆಯಿಂದ ಆರೋಪಿಯು ಟಾಟಾಸುಮೋ ಕೆಎ-53-0741 ನ್ನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದೂರುದಾರರು ಚಲಾಯಿಸುತ್ತಿದ್ದ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದೂರುದಾರರು ಮತ್ತು ಮಾರಪ್ಪ ಇಬ್ಬರೂ ವಾಹನ ಸಮೇತ ಕೆಳಗೆ ಬಿದ್ದಾಗ ಇಬ್ಬರಿಗೂ ರಕ್ತಗಾಯಗಳಾಗಿರುತ್ತದೆ.

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ.ದಿನಾಂಕ 24-05-2016 ರಂದು ಸಂಜೆ ಸುಮಾರು 5-30 ಗಂಟೆ ಸಮಯದಲ್ಲಿ ದೂರುದಾರರಾದ ಶ್ರೀ. ಶ್ರೀನಿವಾಸ. ಬಿನ್‌  ವೆಂಕಟೇಶಪ್ಪ, ಕಾಡುಕದಿರೇನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ದೂರುದಾರರ ತಮ್ಮನಾದ ಮಂಜುನಾಥ್ ಆತನ ಸ್ನೇಹಿತ ಜಗದೀಶ್ ರವರು ಬೆಂಗಳೂರಿಗೆ ಹೋಗಲು ಮಂಜುನಾಥ್ ರವರ  ಟಾಟಾ ಇಂಡಿಕಾ ಕಾರ್ ಸಂಖ್ಯೆ ಕೆಎ-53 ಬಿ-3647 ಅನ್ನು ಚಲಾಯಿಸಿಕೊಂಡು ಬಂಗಾರಪೇಟೆ- ಬೂದಿಕೋಟೆಯ ಮುಖ್ಯ ರಸ್ತೆಯ ಕೊಮ್ಮೇನಹಳ್ಳಿ ಬಳಿ  ರಸ್ತೆಯಲ್ಲಿ ಹೋಗುತ್ತಿದ್ದಾಗ, ಎದುರಿಗೆ ಬಂಗಾರಪೇಟೆ ಕಡೆಯಿಂದ ಟಾಟಾ ಸುಮೋ ವಾಹನ ಸಂಖ್ಯೆ  ಕೆಎ-34 ಎನ್-561  ಅನ್ನು ಅದರ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು  ಮಂಜುನಾಥ್ ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ  ತಲೆಗೆ  ಬಾರಿ ರಕ್ತ ಗಾಯಗಳಾಗಿದ್ದು,  ಜಗದೀಶ್ ರವರಿಗೆ ಮುಖಕ್ಕೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಿದಾಗ ಅಪಘಾತದಿಂದ ಉಂಟಾದ  ಗಾಯಗಳಿಂದ  ಮಂಜುನಾಥ್ ರವರು ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ.

-ಭದ್ರತಾ ಕಾಯ್ದೆ : ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s