ದಿನದ ಅಪರಾಧಗಳ ಪಕ್ಷಿನೋಟ 27ನೇ ಜೂನ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ:27.06.2016 ರಂದು  ಬೆಳಿಗ್ಗೆ 10.00 ಗಂಟೆಯಿಂದ  ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

-ಕೊಲೆ : 01

ಕಾಮಸಮುದ್ರಂ ಪೊಲೀಸ್‌ ಠಾಣೆಯಲ್ಲಿ ಕೊಲೆಗೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 27.06.2016 ರಂದು ದೂರುದಾರರಾದ ಶ್ರೀಮತಿ ಬಸಮ್ಮ ಕೋಂ  ಸೀನಪ್ಪ, ಗರುಡಕೆಂಪನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ದೂರುದಾರರ ಮಗಳಾದ ಧನಲಕ್ಷ್ಮಿ ಎಂಬಾಕೆಯನ್ನು ಆರೋಪಿ ಮುರುಗೇಶ್‌ ರವರಿಗೆ ಈಗ್ಗೆ 13 ವರ್ಷಗಳ ಹಿಂದೆ ಕೊಟ್ಟು ಮದುವೆ ಮಾಡಿದ್ದು, ದಿನಾಂಕ 26.06.2016 ರಂದು ರಾತ್ರಿ 7-00 ಗಂಟೆಯಲ್ಲಿ,  ದೂರುದಾರರ ಮಗಳಾದ ಧನಲಕ್ಷ್ಮಿ ಮತ್ತು ಆಕೆಯ ಗಂಡ ಮುರುಗೇಶ್‌ ರವರು ಸಂಸಾರದ ವಿಚಾರದಲ್ಲಿ ಗಲಾಟೆಗಳಾಗಿದ್ದು, ಈ ವಿಚಾರರದಲ್ಲಿ ಆರೋಪಿಗಳಾದ ಮುರುಗೇಶ್‌ ಮತ್ತು ತಂದೆ ನರಸಿಂಹಪ್ಪ ರವರುಗಳು ಸೇರಿಕೊಂಡು  ಧನಲಕ್ಷ್ಮಿ 28 ವರ್ಷ  ರವರನ್ನು ಕೊಲೆ ಮಾಡುವ ಉದ್ದೇಶದಿಂದ ಆಕೆಯ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿ ಗಾಯಗೊಳಿಸಿ,  ಎಸ್‌‌. ಎನ್‌. ಆರ್‌. ಆಸ್ಪತ್ರೆ ಕೋಲಾರದಲ್ಲಿ ಚಿಕಿತ್ಸೆಗಾಗಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ದಿನಾಂಕ:27.06.2016 ರಂದು  ಬೆಳಗ್ಗೆ ಆಸ್ವತ್ರೆಯಲ್ಲಿ ಮೃತಪಟ್ಟಿರುತ್ತಾರೆ.

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ :ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ಮೋಸ: ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ :ಇಲ್ಲ

-ಮನುಷ್ಯ ನಾಪತ್ತೆ : 01

ಮಾರಿಕುಪ್ಪಂ ಪೊಲೀಸ್‌ ಠಾಣೆಯಲ್ಲಿ  ಹೆಂಗಸ್ಸು ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 27.06.2016 ರಂದು ದೂರುದಾರರಾದ ಶ್ರೀ. ನಾರಾಯಣಪ್ಪ ಬಿನ್‌  ಪಾಣಿ  ದೊಡ್ಡಕಲ್ಲಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ ದೂರುದಾರರ ಮಗಳಾದ ರೇಖಾ ವಯಸ್ಸು 21 ವರ್ಷ ರವರು ದಿನಾಂಕ 25.062016 ರಂದು ಬೆಳಿಗ್ಗೆ 9.00 ಗಂಟೆಗೆ ಕೆಲಸವನ್ನು ಹುಡುಕಿಕೊಂಡು ಬರುತ್ತೇನೆಂದು ಬೆಂಗಳೂರಿಗೆ ಹೋದವಳು ಮನೆಗೆ ವಾಪಸ್ ಬಾರದೇ ಕಾಣೆಯಾಗಿರುತ್ತಾರೆ.

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : ಇಲ್ಲ

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು : ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s