ಪತ್ರಿಕಾ ಪ್ರಕಟಣೆ 29 ನೇ ಜೂನ್‌ 2016

                                          ಪತ್ರಿಕಾ ಪ್ರಕಟಣೆ

ಕೆಜಿಎಫ್ ಪೊಲೀಸ್ ಇಲಾಖೆಯ ದಲಿತರ ಕುಂದುಕೊರತೆಗಳ ಸಭೆ :
ದಲಿತರ ಮೇಲೆ ದೌರ್ಜನ್ಯ ತಡೆಯಲು ನಿರ್ದಾಕ್ಷಿಣ್ಯ ಕ್ರಮ : ಎಸ್ಪಿ ಭಗವಾನ್‌ದಾಸ್
ಕೆ.ಜಿ.ಎಫ್., ಜೂ. ೨೯:

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಆರ್. ಭಗವಾನ್‌ದಾಸ್ ಅವರು ತಿಳಿಸಿದರು.

ಅವರು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಬುಧವಾರದಂದು ಬೆಳಿಗ್ಗೆ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ, ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕುಂದುಕೊರತೆಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ದಲಿತರು ಅವರಿಗಿರುವ ಸಮಸ್ಯೆಗಳ ಕುರಿತು ಆಗಿಂದಾಗ್ಗೆ ನಿರ್ಭಯದಿಂದ ದೂರುಗಳನ್ನು ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಕರೆ ನೀಡಿದರು. ದಲಿತರ ಸಮಸ್ಯೆಗಳಿಗೆ ಸ್ಪಂಧಿಸದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ದ ದೂರು ನೀಡಿದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು ಹಾಗೂ ಹಿಂದಿನ ಸಭೆಯಲ್ಲಿ ದಲಿತ ಮುಖಂಡರು ಪ್ರಸ್ತಾಪಿಸಿರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಆರ್. ಭಗವಾನ್‌ದಾಸ್ ಅವರು ತಿಳಿಸಿದರು.

ದಲಿತ ಸಾರ್ವಜನಿಕ ಬಂಧುಗಳು ಯಾವುದೇ ಸಂದರ್ಭದಲ್ಲೂ ತಮ್ಮನ್ನು ಭೇಟಿಯಾಗಿ, ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂದು, ದಲಿತರಿಗೆ ಅನ್ಯಾಯವೆಸಗುವ ಪೊಲೀಸ್ ಅಧಿಕಾರಿಗಳ ವಿರುದ್ದ ದೂರುಗಳು ಬಂದಲ್ಲಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ನಿರ್ದಾಕ್ಷಣ್ಯ ಕ್ರಮ ಜರುಗಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಆರ್. ಭಗವಾನ್‌ದಾಸ್ ಅವರು ಸಭೆಯಲ್ಲಿ ತಿಳಿಸಿದರು ಸಭೆಯಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲದೇ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಇತರೆ ಇಲಾಖೆಗಳ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ಕೆಲವೂಂದು ಅರ್ಜಿಗಳು, ವರದಿಗಳನ್ನು ಕಳುಹಿಸಿಕೊಟ್ಟಿದ್ದು, ಸುಮಾರು ಸಮಸ್ಯೆಗಳು ಇತ್ಯರ್ಥವಾಗಿದೆ ಎಂಬುದರ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಆರ್. ಭಗವಾನ್‌ದಾಸ್ ಅವರು ಸಭೆಯಲ್ಲಿ ವಿವರಿಸಿದರು.

ಕೆಜಿಎಫ್ ಪೊಲೀಸ್ ಜಿಲ್ಲಾ ಮಟ್ಟದ ದಲಿತರ ಕುಂದುಕೊರತೆಗಳ ಸಭೆಯಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ, ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಎಸ್.ಆರ್. ಜಗದೀಶ್, ಎಂ.ಎಸ್. ಪವನ್‌ಕುಮಾರ್, ಜಿ.ಎನ್. ವೆಂಕಟಾಚಲಪತಿ, ಎಂ.ಡಿ. ಲಕ್ಷ್ಮೀನಾರಾಯಣ, ಟಿ.ಎಂ. ಶಿವಕುಮಾರ್ ರವರುಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪಿ.ಎಸ್.ಐ.ಗಳು, ತಾಲ್ಲೂಕಿನ ವಿವಿಧ ದಲಿತ ಸಂಘಟನೆಗಳ ಮುಖಂಡರು, ದಲಿತ ಸಮುದಾಯದವರು ಭಾಗವಹಿಸಿದ್ದರು.
ಚಿತ್ರ ಶೀರ್ಷಿಕೆ: ೨೯ಕೆಜಿಎಫ್೦೧: ದಲಿತರ ಸಭೆಯಲ್ಲಿ ಎಸ್ಪಿ ಭಗವಾನ್‌ದಾಸ್, ಡಿವೈಎಸ್ಪಿ ಪುಟ್ಟಮಾದಯ್ಯ ಇತರರು

29 KGF01

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s