ದಿನದ ಅಪರಾಧಗಳ ಪಕ್ಷಿನೋಟ 02ನೇ ಜುಲೈ 2016

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 01.07.2016 ರಂದು  ಸಂಜೆ  05.00 ಗಂಟೆಯಿಂದ ದಿನಾಂಕ 02.07.2016 ರಂದು  ಬೆಳಿಗ್ಗೆ 10.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ :ಇಲ್ಲ

-ಕನ್ನ ಕಳುವು : ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು :ಇಲ್ಲ

-ದೊಂಬಿ : ಇಲ್ಲ

-ಮೋಸ: ಇಲ್ಲ

-ಹಲ್ಲೆ :ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ:01

ಬೇತಮಂಗಲ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 01.07.2016 ರಂದು ದೂರುದಾರರಾದ ಶ್ರೀಮತಿ ನಾಗಮ್ಮ ಕೋಂ  ಬಾಬು, ಅಯ್ಯಪ್ಪಲ್ಲಿ ಗ್ರಾಮ ರವರು ನೀಡಿದ ದೂರಿನಲ್ಲಿ, ದೂರುದಾರರ ಮಗಳಾದ ಕುಮಾರಿ(ಹೆಸರು ಬದಲಾವಣೆ) 16 ವರ್ಷ, ರವರನ್ನು ಆರೋಪಿ ಮಂಜುನಾಥ್ ರವರು ಮದುವೆಯಾಗುವುದಾಗಿ ತಿಳಿಸಿ. ನಿರ್ಜನ್ಯ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಸಂಬೋಗ ಮಾಡಿರುತ್ತಾರೆ. ಸದರಿ ವಿಚಾರವನ್ನು ಯಾರಿಗಾದರು ತಿಳಿಸಿದರೆ ಕೊಲೆ ಮಾಡಿ ಸಾಯಿಸುವುದಾಗಿ ಪ್ರಾಣ ಬೆದರಿಕೆ ಹಾಕಿರುತ್ತಾರ.

-ಮನುಷ್ಯ ನಾಪತ್ತೆ :01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮನುಷ್ಯ ನಾಪತ್ತೆ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ 01.07.2016 ರಂದು ದೂರುದಾರರಾದ ಶ್ರೀಮತಿ ಸಾರತಿ,  ಕೋಂ. ಮಂಜುನಾಥ, ಹುಣಸನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ 24.06.2016 ರಂದು ಬೆಳಿಗ್ಗೆ 6.00 ಗಂಟೆಗೆ ದೂರುದಾರರ ಗಂಡನಾದ ಮಂಜುನಾಥ್ ಬಿನ್ ಮುನಿವೆಂಕಟಪ್ಪ ವಯಸ್ಸು 35 ವರ್ಷ ರವರು ಬೆಂಗಳೂರಿಗೆ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ತಿಳಿಸಿ, ಮನೆಯಿಂದ ಹೋದವರು ಇದುವರೆವಿಗೂ  ಮನೆಗೆ ವಾಪಸ್ಸು ಬರದೆ ಕಾಣಿಯಾಗಿರುತ್ತಾರೆ.

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು :01

ಉರಿಗಾಂ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:01.07.2016  ರಂದು ದೂರುದಾರರಾದ ಶ್ರೀ.  ವಿಜಯಕುಮಾರ್‌ ಬಿನ್‌. ರಾಜರತ್ನಮ್‌, ನಂ 124,  ವೆಸ್ಲಿನ್‌ ಬ್ಲಾಕ್‌ ಉರಿಗಾಂ ರವರು ನೀಡಿದ ದೂರಿನಲ್ಲಿ. ದಿನಾಂಕ 01.07.2016  ರಂದು  ಬೆಳಿಗ್ಗೆ 8.30 ಗಂಟೆಯಲ್ಲಿ ಅವರ ಹೋಂಡಾ ಆಕ್ಟೀವ  ವಾಹನ ಸಂಖ್ಯೆ  KA-08 S-5373  ಅನ್ನು  ಎ.ಆರ್‍.ಟಿ .ಓ ಕಛೇರಿ ಮುಂಭಾಗ ಬಂಗಾರಪೇಟೆ-ಕೆ.ಜಿ.ಎಪ್  ಮುಖ್ಯ ರಸ್ತೆಯಲ್ಲಿ ಚಲಾಯಿಸಿಕೊಂಡು ಹೋಗುತ್ತಿದ್ದಾಗ. ಬಂಗಾರಪೇಟೆ ಕಡೆಯಿಂದ ಬರುತ್ತಿದ್ದ, ಆಂದ್ರ ಪ್ರದೇಶದ ಸರ್ಕಾರಿ ಬಸ್ ಸಂಖ್ಯೆ  AP 28 Z-5368ನ್ನು ಅದರ  ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂದ  ಚಲಾಯಿಸಿಕೊಂಡು ಬಂದು  ದೂರುದಾರರ ದ್ವಿಚಕ್ರ ವಾಹನಕ್ಕೆ  ಡಿಕ್ಕಿ ಪಡಿಸಿದ್ದರಿಂದ ದೂರುದಾರರಿಗೆ ಕಾಲಿಗೆ ರಕ್ತಗಾಯಗಳಾಗಿರುತ್ತದೆ.

-ಭದ್ರತಾ ಕಾಯ್ದೆ :ಇಲ್ಲ

-ಇತರೆ ಪ್ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s