ದಿನದ ಅಪರಾಧಗಳ ಪಕ್ಷಿನೋಟ 04 ನೇ ಆಗಸ್ಟ್‌ 2016 ಸಂಜೆ

ಕೆ.ಜಿ.ಎಫ್ ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 04.08.2016 ರಂದು ಬೆಳ್ಳಿಗ್ಗೆ 10.00 ಗಂಟೆಯಿಂದ ಸಂಜೆ 05.00  ಗಂಟೆಯವರೆಗೆ ದಾಖಲಾಗಿರುವ ಪ್ರಕರಣಗಳ ವಿವರಗಳು.

 -ಕೊಲೆ : ಇಲ್ಲ

-ಕೊಲೆಗೆ ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಕನ್ನ ಕಳುವು :ಇಲ್ಲ

-ಕಳವು ಪ್ರಕರಣ : ಇಲ್ಲ

-ಸಾಮಾನ್ಯ ಕಳುವು : ಇಲ್ಲ

-ದೊಂಬಿ : ಇಲ್ಲ

-ಮೋಸ : ಇಲ್ಲ

-ಹಲ್ಲೆ : ಇಲ್ಲ

-ಅಪಹರಣ : ಇಲ್ಲ

– ಮಹಿಳೆ ಮೇಲೆ ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ: 04.08.2016 ರಂದು ದೂರುದಾರರಾದ ಶ್ರೀ. ಅಶ್ವನಿ ಕೊಂ. ಮುನೇಶ್‌, ಚಲಗಾನಹಳ್ಳಿ ಗ್ರಾಮ ರವರು ನೀಡಿದ ದೂರಿನಲ್ಲಿ. ದಿನಾಂಕ 25.05.2015 ರಂದು ದೂರುದಾರರ ಜೊತೆ ಆರೋಪಿ ಮುನೇಶ್‌ ರವರೊಂದಿಗೆ ಮದುವೆಯಾಗಿದ್ದು, ಮದುವೆಯ ಕಾಲದಲ್ಲಿ ಹಣ ಮತ್ತು ಬಂಗಾರ ವಡವೆಗಳನ್ನು ವರದಕ್ಷಿಣೆಯಾಗಿ ನೀಡಿದ್ದು,  ಆರೋಪಿಗಳಾದ ಮುನೇಶ್‌, ವೆಂಕಟೇಶಪ್ಪ, ನಾನಮ್ಮ, ಶ್ರೀರಾಮಪ್ಪ, ಸುನಂದಮ್ಮ ರವರುಗಳು ಇನ್ನು ಹೆಚ್ಚಿಗೆ ವರದಕ್ಷಿಣಿ ತರುವಂತೆ ದೂರುದಾರರಿಗೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಕಿರುಕುಳ ನೀಡಿ ಕೈಗಳಿಂದ ಹೊಡೆದು ಪ್ರಾಣಬೆದರಿಕೆ ಹಾಕಿ ಕೆಟ್ಟ ಮಾತುಗಳಿಂದ ಬೈದು ಹಿಂಸೆ ನೀಡಿರುತ್ತಾರೆ.

-ಮನುಷ್ಯ ನಾಪತ್ತೆ : ಇಲ್ದ

-ಜೂಜಾಟ ಕಾಯ್ದೆ : ಇಲ್ಲ

-ರಸ್ತೆ ಅಪಘಾತಗಳು : 01

ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ರಸ್ತೆ ಅಪಘಾತಕ್ಕೆ ಸಂಬಂದಿಸಿದ ಪ್ರಕರಣ ದಾಖಲಾಗಿರುತ್ತದೆ. ದಿನಾಂಕ:04.08.2016 ರಂದು ದೂರುದಾರರಾದ ಶ್ರೀ.ನಾರಾಯಣಪ್ಪ ಬಿನ್‌ ಪಿಳ್ಳಪ್ಪ, ಗಂಗಾಮ್ಮ ಪಾಳ್ಯ, ಬಂಗಾರಪೇಟೆ ರವರು ನೀಡಿದ ದೂರಿನಲ್ಲಿ ದಿನಾಂಕ 29.07.2016 ರಂದು ರಾತ್ರಿ ಸುಮಾರು 7.30 ಗಂಟೆಯ ದೂರುದಾರರ ಮಗನಾದ ಚಕ್ರವರ್ತಿ ಮತ್ತು ಅವರ ಮಗಳಾದ ಚಂದನಾ ರವರು ಹೊಸಕೋಟೆಗೆ ಹೋಗಲು ಸ್ಟಾರ್ ಸಿಟಿ ದ್ವಿಚಕ್ರವಾಹನವನ್ನು ಚಲಾಯಿಸಿಕೊಂಡು ಬಂಗಾರಪೇಟೆ- ಕೋಲಾರ ಮುಖ್ಯ ರಸ್ತೆಯಲ್ಲಿರುವ ಬಾವರಹಳ್ಳಿ ಗೇಟ್ ಸಮೀಪ ಹೋಗುತ್ತಿದ್ದಾಗ ಚಕ್ರವರ್ತಿ ರವರ ದ್ವಿಚಕ್ರವಾಹನದ ಆಯಾ ತಪ್ಪಿ ಕೆಳಗೆ ಬಿದ್ದು, ತೀವ್ರ ಸ್ವರೂಪ ರಕ್ತಗಾಯಗಳಾಗಿದ್ದರಿಂದ,  ಬೆಂಗಳೂರು ಈಸ್ಟ್ ಪಾಯಿಂಟ್ ಆಸ್ಪತ್ರೆಗೆ ದಾಖಲಿಸಿದ್ದು, ದಿನಾಂಕ 03.08.2016 ರಂದು ರಾತ್ರಿ ಸುಮಾರು 1-30 ಗಂಟೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಚಕ್ರವರ್ತಿ  30 ವರ್ಷ ರವರು ಮೃತಪಟ್ಟಿರುತ್ತಾರೆ.

-ಭದ್ರತಾ ಕಾಯ್ದೆ : ಇಲ್ಲ

-ಇತರೆ ರಕರಣಗಳು :ಇಲ್ಲ

-ಅಸ್ವಾಭಾವಿಕ ಮರಣ :ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು :  ಇಲ್ಲ

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s