ಪತ್ರಿಕಾ ಪ್ರಕಟಣೆ

                                                 ಪತ್ರಿಕಾ ಪ್ರಕಟಣೆ

                              ಕೆಜಿಎಫ್ : ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗಾಂಧಿಜಯಂತಿ ಆಚರಣೆ

ಕೋಲಾರ ಚಿನ್ನದ ಗಣಿ ಪ್ರದೇಶದ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಭಾನುವಾರದಂದು ಮಹಾತ್ಮಗಾಂಧಿ ಜಯಂತಿಯನ್ನು ಅರ್ಥಪೂರ್ಣವಾದ ರೀತಿಯಲ್ಲಿ ಆಚರಿಸಲಾಯಿತು.

ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ ಅವರು ಮಹಾತ್ಮನ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮಗಾಂಧಿಜೀ ಅವರ ಕೊಡುಗೆಯನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಸ್ವಚ್ಚತೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪೊಲೀಸ್ ಕಛೇರಿಯ ಒಳಾಂಗಣ ಹಾಗೂ ಹೊರಾಂಗಣದಲ್ಲಿ ಸ್ವಚ್ಚತೆಯನ್ನು ಶ್ರಮದಾನದ ಮೂಲಕ ಮಾಡಲಾಯಿತು. ಶ್ರಮದಾನದಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಸಕ್ರಿಯವಾಗಿ ಭಾಗವಹಿಸಿದ್ದರು.

ಉರಿಗಾಂ ಸರ್ಕಲ್ ಇನ್ಸ್‌ಪೆಕ್ಟರ್ ಸುಧೀರ್, ನಿಸ್ತಂತು ನಿರೀಕ್ಷಕ ಎನ್.ಉಮಾಶಂಕರ್, ಆರ್‌ಪಿಐ ವಿ.ಸೋಮಶೇಖರ್, ಪಿಎಸ್‌ಐ ಬಿ.ಪಿ.ಮಂಜು, ಶ್ರೀನಿವಾಸ, ಎ.ಎಸ್.ಐ.ಗಳಾದ ವಿಜಯೇಂದ್ರ, ಬಿ.ಪಿ.ಮುರಳೀಧರ, ಎನ್.ಜಿ.ಚೌಡಪ್ಪ, ಎನ್.ಶೀನಪ್ಪ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ವಿ.ಮಂಜುನಾಥ, ಎಸ್.ಹರೀಶ್ ಹಾಗೂ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಕೆಜಿಎಫ್ ಪೊಲೀಸ್ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ, ವೃತ್ತ ಕಛೇರಿಗಳಲ್ಲಿ ಹಾಗೂ ಡಿ.ಎ.ಆರ್. ಆವರಣದಲ್ಲಿ ಸ್ವಚ್ಚತೆ ಕಾರ್ಯಕ್ರಮವನ್ನು ಗಾಂಧಿ ಜಯಂತಿ ಪ್ರಯುಕ್ತ ಮಾಡಲಾಯಿತು.

 

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s