ಪತ್ರಿಕಾ ಪ್ರಕಟಣೆ 21.10.2016

   ಪತ್ರಿಕಾ ಪ್ರಕಟಣೆ

ಕೆಜಿಎಫ್ : ಪೊಲೀಸ್ ಹುತಾತ್ಮರ ದಿನಾಚರಣೆ
ಸಮಾಜಕ್ಕೆ ಪೊಲೀಸರ ಸೇವೆ ಶ್ಲಾಘನೀಯ : ಜಿಲ್ಲಾ ಸತ್ರ ನ್ಯಾಯಾಧೀಶ ಜಗದೀಶ್ವರ

         ರಾಷ್ಟ್ರದಾದ್ಯಂತ ಸಾರ್ವಜನಿಕರ ನೆಮ್ಮದಿಗೆ ಧಕ್ಕೆಯಾಗದಂತೆ ಹಗಲಿರುಳು ದುಡಿಯುವ ಪೊಲೀಸರ ಸೇವೆಯು ಶ್ಲಾಘನೀಯವೆಂದು ಕೆಜಿಎಫ್ ಪೀಠದ ೩ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಜಗದೀಶ್ವರ ಅವರು ನುಡಿದರು.

ಅವರು ಕೆಜಿಎಫ್ ಪೊಲೀಸ್ ಜಿಲ್ಲೆಯ ರಾಬರ್ಟ್‌ಸನ್‌ಪೇಟೆ ಪೊಲೀಸ್ ವೃತ್ತದಲ್ಲಿ ಶುಕ್ರವಾರದಂದು ಬೆಳಿಗ್ಗೆ ಆಯೋಜಿಸಿದ್ದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿ ಮಾತನಾಡಿದರು.
ಸಮಾಜದಲ್ಲಿ ಶಾಂತಿ, ಸೌಹಾರ್ದತೆ, ಮತ್ತು ನಾಗರೀಕರ ಸುರಕ್ಷತೆಗಾಗಿ ಹಗಲಿರುಳು, ತಮ್ಮ ಪ್ರಾಣವನ್ನು ಲೆಕ್ಕಿಸದೇ ದುಡಿಯುತ್ತಿರುವ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುವ ವೇಳೆಯಲ್ಲಿ ಹುತಾತ್ಮರಾದದ್ದನ್ನು ಸ್ಮರಿಸಿ ವರ್ಷಕ್ಕೊಮ್ಮೆ ಹುತಾತ್ಮರ ದಿನವನ್ನು ಆಚರಿಸಿ, ಗೌರವ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯವೆಂದರು. ಹುತಾತ್ಮರಾದ ಪೊಲೀಸರ ಕುಟುಂಬಗಳ ಕಲ್ಯಾಣಕ್ಕೆ ಸರ್ಕಾರವು ಸೂಕ್ತವಾದ ಯೋಜನೆಯನ್ನು ಜಾರಿಗೆ ತರಬೇಕೆಂದು ಕೆಜಿಎಫ್ ಪೀಠದ ೩ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಂ. ಜಗದೀಶ್ವರ ಅವರು ಕೋರಿದರು.

ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರು ರಾಷ್ಟ್ರದಾದ್ಯಂತ ೪೭೩ ಮಂದಿ ಪೊಲೀಸರು ಮೃತಪಟ್ಟಿದ್ದಾರೆ ಎಂದು ತಿಳಿಸಿದರು. ಕಾನೂನು ಪಾಲನೆಯ ಪೊಲೀಸರ ಕರ್ತವ್ಯ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆಯೆಂದರು. ದೇಶಾದ್ಯಂತ ಹುತಾತ್ಮರಾದ ಪೊಲೀಸರ ಪಟ್ಟಿಯನ್ನು ಡಿವೈಎಸ್ಪಿ ಪುಟ್ಟಮಾದಯ್ಯ ವಾಚಿಸಿದರು.

ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು, ಸಿಬ್ಬಂಧಿಗಳು, ಪತ್ರಕರ್ತರು, ವಕೀಲರು, ರೈತರು, ಹಲವಾರು ಸಂಘ ಸಂಸ್ಥೆಗಳವರು ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು.  ಡಿ.ಎ.ಆರ್.ನ ಆರ್.ಪಿ.ಐ. ವಿ.ಸೋಮಶೇಖರ್ ಅವರ ನೇತೃತ್ವದಲ್ಲಿ ಆಕರ್ಷಕ ಕವಾಯಿತು ನಡೆಯಿತು.

ಕಾರ್ಯಕ್ರಮದಲ್ಲಿ ಕೆಜಿಎಫ್ ನ್ಯಾಯಾಲಯದ ನ್ಯಾಯಾಧೀಶರಾದ ಎಸ್.ಜೆ. ಕೃಷ್ಣಾ, ಜಯಪ್ರಕಾಶ್, ಲೋಕೇಶ್, ರವಿಕುಮಾರ್, ನಗರಸಭಾಧ್ಯಕ್ಷ ರಮೇಶ್‌ಜೈನ್, ಗಣಿ ಭದ್ರತಾಧಿಕಾರಿ, ಕೆ.ಡಿ.ಎ. ಮಾಜಿ ಅಧ್ಯಕ್ಷ ಶ್ರೀಧರ್‌ರಾಜ್, ಗೃಹರಕ್ಷಕ ದಳದ ಮಾಜಿ ಸಮಾದೇಷ್ಠರಾದ ಎನ್.ಆರ್.ಪುರುಷೋತ್ತಮ, ಕಸಾಪ ಮಾಜಿ ಅಧ್ಯಕ್ಷ ವೀರವೆಂಕಟಪ್ಪ, ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ ಮತ್ತಿತರರು ಹಾಜರಿದ್ದರು. ಎ.ಎಸ್.ಐ. ವಿಕ್ರಂಶ್ರೀನಿವಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಪೊಲೀಸ್ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಕೆ, ಪಥಸಂಚಲನ, ಪೊಲೀಸ್ ಸ್ಮಾರಕಕ್ಕೆ ಗೌರವ ಸಮರ್ಪಣೆ ಕಾರ್ಯಕ್ರಮಗಳು ಅರ್ಥಪೂರ್ಣವಾದ ರೀತಿಯಲ್ಲಿ ನಡೆದವು.
ಚಿತ್ರ ೨೧ ಕೆಜಿಎಫ್ ೦೧ ಪೊಲೀಸ್ ಹುತಾತ್ಮ ದಿನಾಚರಣೆಯಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ, ನ್ಯಾಯಾಧೀಶರಾದ ಜಗದೀಶ್ವರ, ಎಸ್.ಜೆ. ಕೃಷ್ಣಾ, ಜಯಪ್ರಕಾಶ್, ಲೋಕೇಶ್, ರವಿಕುಮಾರ್.

Advertisements
This entry was posted in Uncategorized. Bookmark the permalink.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s