ಪತ್ರಿಕಾ ಪ್ರಕಟಣೆ: ದಲಿತರ ಕುಂದು ಕೊರತೆಗಳ ಸಭೆ

ಪತ್ರಿಕಾ ಪ್ರಕಟಣೆ
ಕೆಜಿಎಫ್ ಪೊಲೀಸ್ ಇಲಾಖೆಯ ದಲಿತರ ಕುಂದುಕೊರತೆಗಳ ಸಭೆ :
ದಲಿತರ ಮೇಲೆ ದೌರ್ಜನ್ಯ ತಡೆಯಲು ನಿರ್ದಾಕ್ಷಿಣ್ಯ ಕ್ರಮ : ಡಿವೈಎಸ್ಪಿ ಪುಟ್ಟಮಾದಯ್ಯ

ಕೆಜಿಎಫ್ ಪೊಲೀಸ್ ಜಿಲ್ಲೆಯಲ್ಲಿ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ನಿರ್ದಾಕ್ಷಿಣ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಅವರು ತಿಳಿಸಿದರು.

ಅವರು ಕೆಜಿಎಫ್‌ನ ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಶನಿವಾರದಂದು ಬೆಳಿಗ್ಗೆ ಪೊಲೀಸ್ ಇಲಾಖೆಯಿಂದ ಏರ್ಪಡಿಸಿದ್ದ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕುಂದುಕೊರತೆಗಳ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ದಲಿತರು ತಂತಮ್ಮ ಸಮಸ್ಯೆಗಳ ಕುರಿತು ಆಗಿಂದಾಗ್ಗೆ ನಿರ್ಭಯದಿಂದ ದೂರುಗಳನ್ನು ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆಂದು ಕರೆ ನೀಡಿದರು. ದಲಿತರ ಸಮಸ್ಯೆಗಳಿಗೆ ಸ್ಪಂಧಿಸದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ದ ದೂರು ನೀಡಿದ್ದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು.
ದಲಿತ ಸಾರ್ವಜನಿಕ ಬಂಧುಗಳು ಯಾವುದೇ ಸಂದರ್ಭದಲ್ಲೂ ತಮ್ಮನ್ನು ಭೇಟಿಯಾಗಿ, ತಂತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದೆಂದು, ದಲಿತರಿಗೆ ಅನ್ಯಾಯವೆಸಗುವ ಪೊಲೀಸ್ ಅಧಿಕಾರಿಗಳ ವಿರುದ್ದ ದೂರುಗಳು ಬಂದಲ್ಲಿ ನಿಸ್ಪಕ್ಷಪಾತವಾಗಿ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವುದಾಗಿ ಡಿವೈಎಸ್ಪಿ ಪುಟ್ಟಮಾದಯ್ಯ ಅವರು ತಿಳಿಸಿದರು.

ಸಭೆಯಲ್ಲಿ ಪೊಲೀಸ್ ಇಲಾಖೆ ಮಾತ್ರವಲ್ಲದೇ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು. ಇತರೆ ಇಲಾಖೆಗಳ ಸಮಸ್ಯೆಗಳ ಕುರಿತು ಸಂಬಂಧಪಟ್ಟ ಇಲಾಖೆಗಳಿಗೆ ಅರ್ಜಿಗಳು, ವರದಿಗಳನ್ನು ಕಳುಹಿಸಿಕೊಟ್ಟು, ಸಮಸ್ಯೆ ಇತ್ಯರ್ಥಕ್ಕಾಗಿ ಕ್ರಮವಿಡುವುದಾಗಿ ಡಿವೈಎಸ್ಪಿ ಪುಟ್ಟಮಾದಯ್ಯ ಅವರು ವಿವರಿಸಿದರು.

ಸಭೆಯ ಪ್ರಾರಂಭದಲ್ಲಿ ದಲಿತ ಮುಖಂಡ ಸೂಲಿಕುಂಟೆ ಆನಂದ್ ಮಾತನಾಡಿ, ಇತ್ತೀಚೆಗೆ ಪೊಲೀಸ್ ಅಧಿಕಾರಿಗಳು ಆತ್ಮಹತ್ಯೆಗಳು ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಅಧಿಕಾರಿಗಳ ಸಹಭಾಗಿತ್ವದಲ್ಲಿ ಧೈರ್ಯ ತುಂಬಲು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಆತ್ಮಹತ್ಯೆಯಿಂದ ಪ್ರಾಣ ಕಳೆದುಕೊಂಡ ಮಾಲೂರು ಸರ್ಕಲ್ ಇನ್ಸ್‌ಪೆಕ್ಟರ್ ಎಂ.ರಾಘವೇಂದ್ರ ಅವರ ನಿಧನಕ್ಕೆ ಎರಡು ನಿಮಿಷ ಮೌನವಾಚರಿಸಿ, ಶ್ರದ್ದಾಂಜಲಿ ಘಟಿಸಲಾಯಿತು.

ಕೆಜಿಎಫ್ ಪೊಲೀಸ್ ಜಿಲ್ಲಾ ಮಟ್ಟದ ದಲಿತರ ಕುಂದುಕೊರತೆಗಳ ಸಭೆಯಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್‌ಗಳಾದ ಎಸ್.ಆರ್. ಜಗದೀಶ್, ನಾರಾಯಣಸ್ವಾಮಿ, ಕೃಷ್ಣ, ಆರ್.ಪಿ.ಐ. ವಿ.ಸೋಮಶೇಖರ್ ಸೇರಿದಂತೆ ಎಲ್ಲಾ ಪೊಲೀಸ್ ಠಾಣೆಗಳ ಪಿ.ಎಸ್.ಐ.ಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕೀನ ವಿವಿಧ ದಲಿತ ಸಂಘಟನೆಗಳ ಮುಖಂಡರು, ದಲಿತ ಸಮುದಾಯದವರು ಭಾಗವಹಿಸಿದ್ದರು.

ಚಿತ್ರ ಶಿರ್ಷಿಕೆ: ೨೨ಕೆಜಿಎಫ್೦೨: ಕೆಜಿಎಫ್‌ನಲ್ಲಿ ನಡೆದ ದಲಿತರ ಸಭೆಯಲ್ಲಿ ಡಿವೈಎಸ್ಪಿ ಪುಟ್ಟಮಾದಯ್ಯ ಇತರರು

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s