ದಿನದ ಅಪರಾಧಗಳ ಪಕ್ಷಿನೋಟ 19ನೇ ನವೆಂಬರ್‍ 2016 ಸಂಜೆ

ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ: 19.11.2016 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 05.00 ಗಂಟೆಯವರೆಗೆ ದಾಖಲಾದ ಅಪರಾಧ ಪ್ರಕರಣಗಳ ವಿವರಗಳು

-ಕೊಲೆ : ಇಲ್ಲ

-ಕೊಲೆಗೆ  ಪ್ರಯತ್ನ : ಇಲ್ಲ

-ಡಕಾಯತಿ : ಇಲ್ಲ

-ಸುಲಿಗೆ : ಇಲ್ಲ

-ಮನೆ ಕಳ್ಳತನ : ಇಲ್ಲ

-ಸಾಧಾರಣ ಕಳ್ಳತನ : ಇಲ್ಲ

-ವಾಹನ ಕಳ್ಳತನ : ಇಲ್ಲ

-ರಸ್ತೆ ಅಪಘಾತಗಳು : 01

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಸಂತೋಷ್ ಕುಮಾರ್‍ ಬಿನ್ ಮುನಿವೆಂಕಟಪ್ಪ, ಹುಣಸನಹಳ್ಳಿ ಗ್ರಾಮ ರವರ ದೊಡ್ಡಪ್ಪನ ಮಗನಾದ ರಾಧಾಕೃಷ್ಣ ರವರು  ದಿನಾಂಕ:18.11.2016 ರಂದು ಸಂಜೆ 6.30 ಗಂಟೆಯಲ್ಲಿ ಹಿರೋ ಹೊಂಡಾ ಸ್ಲ್ಪೆಂಡರ್ NXG ದ್ವಿ ಚಕ್ರ ವಾಹನ ನಂ ಕೆಎ-08 ಕೆ-4358 ವಾಹನವನ್ನು ತಾಲ್ಲೂಕು ಪಂಚಾಯ್ತಿ ಕಛೇರಿ ಕಡೆಯಿಂದ ಚಲಾಯಿಸಿಕೊಂಡು ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಪಾರ್ಕ್ ಮುಂಭಾಗ ಬರುತ್ತಿರುವಾಗ, ಅಂಬೇಡ್ಕರ್ ಸರ್ಕಲ್ ಕಡೆಯಿಂದ  ಬಜಾಜ್ CT100B  ವಾಹನವನ್ನು ಅದರ ಸವಾರ ಅತಿವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು, ರಾಧಾಕೃಷ್ಣ ರವರ ದ್ವಿ ಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ರಾಧಾಕೃಷ್ಣ ವಾಹನ ಸಮೇತ ರಸ್ತೆಯ ಮೇಲೆ ಬಿದ್ದು ತಲೆಗೆ ರಕ್ತ ಗಾಯವಾಗಿದ್ದು, ಚಿಕಿತ್ಸೆಗಾಗಿ ಕೋಲಾರ ಆರ್‍.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ದಿನಾಂಕ:19.11.2016 ರಂದು ಮಧ್ಯಾಹ್ನ 12.00 ಗಂಟೆಯಲ್ಲಿ ಮೃತಪಟ್ಟಿರುತ್ತಾರೆ. ಅಪಘಾತಪಡಿಸಿದ ವ್ಯಕ್ತಿಯು ವಾಹನ ಸಮೇತ ಸ್ಥಳದಿಂದ ಪರಾರಿಯಾಗಿರುತ್ತಾನೆ.

-ಮೋಸ/ವಂಚನೆ ಪ್ರಕರಣಗಳು : ಇಲ್ಲ

– ದೊಂಬಿ : ಇಲ್ಲ

– ಜೂಜಾಟ ಕಾಯ್ದೆ : ಇಲ್ಲ

-ಅಪಹರಣ : ಇಲ್ಲ

-ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು : ಇಲ್ಲ

-ಹಲ್ಲೆ : ಇಲ್ಲ

-ಇತರೆ : ಇಲ್ಲ

-ಅಕ್ರಮ ಮದ್ಯ ಮಾರಾಟ : ಇಲ್ಲ

-ವ್ಯಕ್ತಿ ಕಾಣೆಯಾಗಿರುವ ಪ್ರಕರಣಗಳು :  ಇಲ್ಲ

-ಅಸ್ವಾಭಾವಿಕ ಮರಣ : 01

ರಾಬರ್ಟ್‌‌ಸನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ರವಿಚಂದ್ರ ಬಿನ್ ಗೋವಿಂದರಾಜ, ವಿವೇಕನಗರ, ರಾಬರ್ಟ್‌‌ಸನ್‌ಪೇಟೆ, ಕೆ.ಜಿ.ಎಫ್ ರವರ ಮಗನಾದ ಪ್ರಶಾಂತ್, ವಯಸ್ಸು 19 ವರ್ಷ ಎಂಬಾತನು ದಿನಾಂಕ: 18/11/2016 ರಂದು ರಾತ್ರಿ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆಹೊಂದಿ, ಯಾವುದೋ ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ.

-ಭದ್ರತಾ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ

-ಸ್ಥಳೀಯ ಮತ್ತು ವಿಶೇಷ ಕಾಯ್ದೆ ಅಡಿ ದಾಖಲಾದ ಪ್ರಕರಣಗಳು : ಇಲ್ಲ
This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s