ಪತ್ರಿಕಾ ಪ್ರಕಟಣೆ ದಿ:19.11.2016

                        ಪತ್ರಿಕಾ ಪ್ರಕಟಣೆ

             ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ರಾಷ್ಟ್ರೀಯ ಐಕ್ಯತಾ ದಿನಾಚರಣೆ

ಕೋಲಾರ ಚಿನ್ನದ ಗಣಿ ಪ್ರದೇಶದ ಚಾಂಫೀಯನ್‌ರೀಫ್ಸ್‌ನಲ್ಲಿನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಶನಿವಾರದಂದು ಬೆಳಿಗ್ಗೆ ರಾಷ್ಟ್ರೀಯ ಐಕ್ಯತಾ ದಿನಾಚರಣೆಯನ್ನು ಪ್ರತಿಜ್ಞಾವಿಧಿ ಸ್ವೀಕಾರದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾ ಪೊಲೀಸ್ ಕಛೇರಿಯ ಸಹಾಯಕ ಆಡಳಿತಾಧಿಕಾರಿ ವಿ.ವಿಶ್ವನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಪ್ರತಿಜ್ಞಾ ವಿಧಿಯ ಸ್ವೀಕಾರ ಕಾರ್ಯಕ್ರಮದಲ್ಲಿ, ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇದ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ಪ್ರತಿಜ್ಞೆ ಮಾಡಿದರು. ಅಲ್ಲದೇ ವೈಯಕ್ತಿಕವಾಗಲೀ ಅಥವಾ ಸಾಮೂಹಿಕವಾಗಲೀ ನಮ್ಮಲ್ಲಿರುವ ಎಲ್ಲಾ ಬೇದ ಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡಲಾಯಿತು.

ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ಸಿ.ಎ.ನಾರಾಯಣಸ್ವಾಮಿ, ಎನ್.ಉಮಾಶಂಕರ್, ಎಎಸ್‌ಐ ಎನ್.ಜಿ.ಚೌಡಪ್ಪ ಸೇರಿದಂತೆ ಜಿಲ್ಲಾ ಪೊಲೀಸ್ ಕಛೇರಿಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

ಚಿತ್ರ ಶಿರ್ಷಿಕೆ: ೧೯ಕೆಜಿಎಫ್೦೧: ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆದ ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಎಎಓ ವಿಶ್ವನಾಥ ಇತರರು

This entry was posted in Uncategorized. Bookmark the permalink.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out / Change )

Twitter picture

You are commenting using your Twitter account. Log Out / Change )

Facebook photo

You are commenting using your Facebook account. Log Out / Change )

Google+ photo

You are commenting using your Google+ account. Log Out / Change )

Connecting to %s